Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:25 - ಕನ್ನಡ ಸತ್ಯವೇದವು C.L. Bible (BSI)

25 “ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ನಡಿಸಬಾರದು; ಅವನಿಂದ ಬಡ್ಡಿಯನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:25
20 ತಿಳಿವುಗಳ ಹೋಲಿಕೆ  

ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.


ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


“ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.


ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ


ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.


ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು