Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:30 - ಕನ್ನಡ ಸತ್ಯವೇದವು C.L. Bible (BSI)

30 “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:30
14 ತಿಳಿವುಗಳ ಹೋಲಿಕೆ  

“ಕರುವಾಗಲಿ, ಕುರಿಮರಿಯಾಗಲಿ, ಆಡುಮರಿಯಾಗಲಿ ಹುಟ್ಟಿ ಏಳು ದಿವಸ ಆದ ಬಳಿಕ ಅದನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕೃತವಾಗುವುದು.


“ದನಗಳಲ್ಲೂ ಆಡುಕುರಿಗಳಲ್ಲೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.


ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸಬೇಕು.


ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು.


ಎಲ್ಲ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಂದು ಗಂಡುಮಗುವಿಗೂ ಜೀತಗಾರರಿಗೂ ಮನೆಯಲ್ಲಿ ಹುಟ್ಟಿದ ಅಥವಾ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡವರಿಗೂ, ಎಂಟು ದಿನಗಳ ವಯಸ್ಸಾದಾಗ ಸುನ್ನತಿ ಮಾಡಿಸಬೇಕು.


ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಇಸ್ರಯೇಲರಿಗೆ ಹೀಗೆ ಆಜ್ಞೆ ಮಾಡು:- ನೀವು ಎತ್ತು, ಕುರಿ ಹಾಗು ಆಡುಗಳ ಕೊಬ್ಬನ್ನು ತಿನ್ನಬಾರದು.


ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.


ಪಕ್ಷಿಯದಾಗಲಿ, ಪ್ರಾಣಿಯದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ತಾನಾಗಿ ಸತ್ತುಬಿದ್ದದ್ದನ್ನು ಅಥವಾ ಕಾಡುಮೃಗ ಕೊಂದದ್ದನ್ನು ಅವನು ತಿಂದು ಅಪವಿತ್ರ ಮಾಡಿಕೊಳ್ಳಬಾರದು. ನಾನು ಸರ್ವೇಶ್ವರ.


“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು