Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:4 - ಕನ್ನಡ ಸತ್ಯವೇದವು C.L. Bible (BSI)

4 ಕಳ್ಳನು ಕದ್ದದ್ದು ಎತ್ತೋ, ಕತ್ತೆಯೋ, ಆಡುಕುರಿಯೋ ಆಗಿದ್ದು, ಅದು ಜೀವದಿಂದಲೇ ಅವನ ಬಳಿ ಸಿಕ್ಕಿದರೆ, ಅವನು ಎರಡರಷ್ಟು ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ ಕದ್ದವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕದ್ದದ್ದು ಎತ್ತಾದರೂ ಕತ್ತೆಯಾದರೂ ಆಡುಕುರಿಯಾದರೂ ಸರಿಯೇ ಅದು ಜೀವದಿಂದಲೇ ಕಳ್ಳನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:4
11 ತಿಳಿವುಗಳ ಹೋಲಿಕೆ  

“ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆ ವಿಷಯವಾದರೂ ಸರಿಯೇ ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ, ಇಬ್ಬರೂ ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾರೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.


“ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು.


“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ, ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


“ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


“ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು.


ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು