Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:7 - ಕನ್ನಡ ಸತ್ಯವೇದವು C.L. Bible (BSI)

7 “ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಬ್ಬನು ಹಣವನ್ನಾದರೂ ಒಡವೆಗಳನ್ನಾದರೂ ಕಾಪಾಡುವದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳವಾಗಿ ಹೋದರೆ ಕಳ್ಳನು ಸಿಕ್ಕುವ ಪಕ್ಷಕ್ಕೆ ಎರಡರಷ್ಟು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲಿ ವಸ್ತುಗಳನ್ನಾಗಲಿ ಇಟ್ಟಿದ್ದು, ಆ ಹಣವಾಗಲಿ ವಸ್ತುಗಳಾಗಲಿ ಕಳುವಾದರೆ ಕಳ್ಳನನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:7
10 ತಿಳಿವುಗಳ ಹೋಲಿಕೆ  

ಕಳ್ಳನು ಕದ್ದದ್ದು ಎತ್ತೋ, ಕತ್ತೆಯೋ, ಆಡುಕುರಿಯೋ ಆಗಿದ್ದು, ಅದು ಜೀವದಿಂದಲೇ ಅವನ ಬಳಿ ಸಿಕ್ಕಿದರೆ, ಅವನು ಎರಡರಷ್ಟು ಈಡು ಕೊಡಬೇಕು.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.


“ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:


“ನಿಮ್ಮಲ್ಲಿ ಯಾರಾದರು ಮತ್ತೊಬ್ಬನಿಂದ ತಮ್ಮ ವಶಕ್ಕೆ ಕೊಡಲಾದ ವಸ್ತುವಿನ ವಿಷಯದಲ್ಲಾಗಲಿ, ತಮ್ಮ ಬಳಿಯಲ್ಲಿ ಇಡಲಾದ ಅಡವಿನ ವಿಷಯದಲ್ಲಾಗಲಿ, ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ, ಸುಳ್ಳಾಡಿಯೋ, ಮತ್ತೊಬ್ಬನನ್ನು ಮೋಸಗೊಳಿಸಿಯೋ


ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು