ವಿಮೋಚನಕಾಂಡ 22:8 - ಕನ್ನಡ ಸತ್ಯವೇದವು C.L. Bible (BSI)8 ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲೀಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲೀಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು. ಅಧ್ಯಾಯವನ್ನು ನೋಡಿ |