Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:1 - ಕನ್ನಡ ಸತ್ಯವೇದವು C.L. Bible (BSI)

1 “ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:1
40 ತಿಳಿವುಗಳ ಹೋಲಿಕೆ  

ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II


‘ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ;


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ನೆರೆಯವನಿಗೆ ವಿರುದ್ಧ ಆಧಾರವಿಲ್ಲದ ಸಾಕ್ಷಿಹೇಳಬೇಡ; ಮಾತಿನಲ್ಲಿ ಅವನಿಗೆ ಮೋಸಮಾಡಬೇಡ.


ಸುಳ್ಳು ಸಾಕ್ಷಿ ಹೇಳುವವನೇ ಅಳಿದುಹೋಗುವನು; ಕೇಳಿದ್ದನ್ನೆ ಹೇಳುವವನ ಸಾಕ್ಷಿ ಅಳಿಯದೆ ಉಳಿಯುವುದು.


ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.


ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II


“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.


“ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.


ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.


ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.


ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.


ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಅವನು ಹಾಗೆ ಮಾಡದೆ ನನ್ನ ಒಡೆಯರಾದ ಅರಸರ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದ. ಅರಸರು ದೇವದೂತನ ಹಾಗಿರುತ್ತೀರಿ. ತಮಗೆ ಸರಿಕಂಡದ್ದನ್ನು ಮಾಡಿ.


ಅರಸನು ಮತ್ತೆ, “ನಿನ್ನ ಯಜಮಾನನ ಮಗ ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಯೇಲರು ಈ ದಿನ ತನಗೆ ಮರಳಿಕೊಡುವರೆಂದು ಹೇಳಿ ಅವನು ಜೆರುಸಲೇಮಿನಲ್ಲೇ ಉಳಿದುಕೊಂಡನು,” ಎಂದನು.


ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.


ಪತಿ ಬಂದಾಗ ಆಕೆ ಅವನಿಗೆ ಅದೇ ಮಾತನ್ನು ಹೇಳುತ್ತಾ, “ನೀವು ಮನೆಗೆ ಸೇರಿಸಿಕೊಂಡ ಆ ಹಿಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕಾಗಿ ನನ್ನ ಬಳಿಗೆ ಬಂದ. ನಾನು ಕೂಗಿಕೊಂಡೆ.


ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು