Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:2 - ಕನ್ನಡ ಸತ್ಯವೇದವು C.L. Bible (BSI)

2 ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:2
36 ತಿಳಿವುಗಳ ಹೋಲಿಕೆ  

ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ,


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.


ದುಷ್ಟರ ಸಂಘದಲ್ಲಿ ಸೇರಬೇಡ, ಕೆಟ್ಟವರ ಹಾದಿಯಲ್ಲಿ ಕಾಲಿಡಬೇಡ.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.


ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.


“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು.


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?


ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು