Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:20 - ಕನ್ನಡ ಸತ್ಯವೇದವು C.L. Bible (BSI)

20 “ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:20
26 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೋಡು, ನಾನು ಜೆರಿಕೋವನ್ನು, ಅದರ ಅರಸನನ್ನು ಹಾಗು ಅದರ ಯುದ್ಧವೀರರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ.


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲ ಮಾಡುವೆನು.


ಬಿಳಾಮನು ಹೀಗೆ ಹೋದುದರಿಂದ ದೇವರಿಗೆ ಸಿಟ್ಟಾಯಿತು. ಸರ್ವೇಶ್ವರನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿ ಇಬ್ಬರು ಆಳುಗಳ ಸಂಗಡ ಸವಾರಿ ಮಾಡುತ್ತಿದ್ದನು.


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು