Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:22 - ಕನ್ನಡ ಸತ್ಯವೇದವು C.L. Bible (BSI)

22 ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:22
12 ತಿಳಿವುಗಳ ಹೋಲಿಕೆ  

"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನಿಮ್ಮ ದೇವರಾದಸರ್ವೇಶ್ವರ ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ, ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವರು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.


ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು