Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:26 - ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮ ನಾಡಿನಲ್ಲಿ ಗರ್ಭಸ್ರಾವವಾಗಲಿ ಬಂಜೆತನವಾಗಲಿ ಇರುವುದಿಲ್ಲ. ನಿಮಗೆ ಪೂರ್ಣವಾದ ಆಯುಸ್ಸನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮ ದೇಶದಲ್ಲಿ ಗರ್ಭಸ್ರಾವವಾಗಲಿ ಬಂಜೇತನವಾಗಲಿ ಇರುವದೇ ಇಲ್ಲ; ನಿಮಗೆ ಸಂಪೂರ್ಣವಾದ ಆಯುಸ್ಸನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮ ಸ್ತ್ರೀಯರು ಮಕ್ಕಳನ್ನು ಪಡೆಯಲು ಶಕ್ತರಾಗುವರು. ನಿಮ್ಮ ಮಕ್ಕಳು ಹುಟ್ಟುವಾಗಲೇ ಸಾಯುವುದಿಲ್ಲ; ನಿಮಗೆ ದೀರ್ಘಾಯುಷ್ಯವನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಗರ್ಭ ಸ್ರಾವವಾಗಲಿ, ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವುದಿಲ್ಲ. ನಾನು ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:26
16 ತಿಳಿವುಗಳ ಹೋಲಿಕೆ  

ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ಅವರ ಹೋರಿ ತಪ್ಪದೆ ಫಲವತ್ತಾಗಿಸುತ್ತದೆ ಅವರ ಗೋವು ಕಂದುಹಾಕದೆ ಈಯುತ್ತದೆ.


ಕೆಲವೇ ದಿನ ಬದುಕುವ ಮಗುವಾಗಲಿ, ಆಯುಸ್ಸು ಮುಗಿಸದ ಮುದುಕನಾಗಲಿ ಇನ್ನು ಇಲ್ಲಿರನು. ನೂರು ವರ್ಷ ಬಾಳುವವನು ‘ಯುವಕ’ ಎನಿಸಿಕೊಳ್ಳುವನು; ನೂರರೊಳಗೆ ಸಾಯುವ ಪಾಪಿಯು ‘ಶಾಪಗ್ರಸ್ತ’ ಎನಿಸಿಕೊಳ್ಳುವನು.


ತುಂಬಿರಲಿ ಸಕಲ ವಿಧ ಧಾನ್ಯಗಳಿಂದ ನಮ್ಮ ಕಣಜಗಳು I ಈಯಲಿ ಸಾವಿರಾರು ಮರಿಗಳನು ನಮ್ಮ ಹೊಲದ ಕುರಿಗಳು II


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ಹಣ್ಣು ಹಣ್ಣು ಮುದುಕನಾಗಿ ಸತ್ತನು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ಸರ್ವೇಶ್ವರಾ, ಇವರಿಗೆ ಏನನ್ನು ವಿಧಿಸುವೆ? ಇವರಿಗೆ ಎಂಥ ಗತಿಯನ್ನು ಬರಮಾಡುವೆ? ಅವರ ಮಹಿಳೆಯರಿಗೆ ಗರ್ಭಪಾತವಾಗಲಿ! ಅವರ ಮೊಲೆ ಬತ್ತಿಹೋಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು