Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:3 - ಕನ್ನಡ ಸತ್ಯವೇದವು C.L. Bible (BSI)

3 ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಲ್ಲದೆ ಬಡವನನ್ನು ಕರುಣಿಸಿ ಪಕ್ಷಪಾತದಿಂದ ತೀರ್ಮಾನ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಇದಲ್ಲದೆ ಬಡವನೆಂದು ಕರುಣಿಸಿ ಪಕ್ಷಪಾತದ ತೀರ್ಪನ್ನು ನೀಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಡವನಿಗೂ ವ್ಯಾಜ್ಯದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:3
10 ತಿಳಿವುಗಳ ಹೋಲಿಕೆ  

ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;


ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು