Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:31 - ಕನ್ನಡ ಸತ್ಯವೇದವು C.L. Bible (BSI)

31 ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:31
37 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು.


ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.


ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.


ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲ್ಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ರಾಜರಿಗೂ ಅಧಿಪತಿಯಾಗಿದ್ದನು. ಸುತ್ತಮುತ್ತಲಿನ ರಾಜರೊಡನೆ ಶಾಂತಿಸಮಾಧಾನದಿಂದಿದ್ದನು.


ಇಸ್ರಯೇಲರ ದೇವರಾದ ಸರ್ವೇಶ್ವರ ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.


ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.


‘ನೀವು ದೀರ್ಘಕಾಲ ಮರುಭೂಮಿಯಲ್ಲಿದ್ದಿರಿ. ಅನಂತರ ನಿಮ್ಮನ್ನು ಜೋರ್ಡನಿನ ಆಚೆ ಅಮೋರಿಯರ ನಾಡಿಗೆ ಕರೆತಂದೆ. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈವಶಮಾಡಿದೆ. ನೀವು ಅವರ ನಾಡನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ನಾಶಮಾಡಿದೆ.


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಅವರನ್ನು ಅವರ ನಗರಗಳಲ್ಲಿ ಸೇರಗೊಡಿಸಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರಲ್ಲವೆ?” ಎಂದನು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು.


ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.


ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.


ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು.


ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು.


“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.


ಅಲ್ಲದೆ, ಅವರೇ ಮಾತುಕೊಟ್ಟಿರುವಂತೆ ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆಯೇ ತೊಲಗಿಸುವರು.


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.


ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು.


ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟರ ದೇಶಗಳವರೆಗೂ ಇರುವ ಎಲ್ಲ ರಾಜರನ್ನು ಆಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು