Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:4 - ಕನ್ನಡ ಸತ್ಯವೇದವು C.L. Bible (BSI)

4 “ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ತಿರುಗಾಡುವಾಗ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೊಡೆದುಕೊಂಡು ಹೋಗಿ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೊಡಕೊಂಡು ಹೋಗಿ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲೀಕನಿಗೆ ಹಿಂತಿರುಗಿಸಬೇಕು. ಒಂದುವೇಳೆ ಆ ಮಾಲೀಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀವು ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ, ಅದು ನಿಮಗೆ ಸಿಕ್ಕಿದರೆ ನೀವು ಅದನ್ನು ಖಂಡಿತವಾಗಿ ತಿರುಗಿ ಅವನಿಗೆ ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:4
9 ತಿಳಿವುಗಳ ಹೋಲಿಕೆ  

ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು.


ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು