Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:6 - ಕನ್ನಡ ಸತ್ಯವೇದವು C.L. Bible (BSI)

6 “ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಬಡವರಿಗೆ ವ್ಯಾಜ್ಯದಲ್ಲಿ ನೀವು ಅನ್ಯಾಯವಾದ ತೀರ್ಪನ್ನು ಕೊಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ತಪ್ಪಿಸಿ ತೀರ್ಪುಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:6
23 ತಿಳಿವುಗಳ ಹೋಲಿಕೆ  

“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ನನ್ನ ದಾಸದಾಸಿಯರು ನನ್ನ ಮೇಲೆ ತಪ್ಪುಹೊರಿಸಿದ್ದರೆ ನಾನು ಆ ತಪ್ಪನು ಅಸಡ್ಡೆ ಮಾಡಿದವನಾಗಿದ್ದರೆ,


ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;


ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು