Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:7 - ಕನ್ನಡ ಸತ್ಯವೇದವು C.L. Bible (BSI)

7 ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀವು ಮೋಸದ ಕಾರ್ಯಕ್ಕೆ ದೂರವಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಕೂಡದು. ಅಂಥ ದುಷ್ಟಕಾರ್ಯ ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸೇ ವಿಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:7
24 ತಿಳಿವುಗಳ ಹೋಲಿಕೆ  

ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


“ಅವರು, ‘ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.


ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.


“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.


ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.


ಅವನು ಅವರ ಹತ್ತಿರಕ್ಕೆ ಬಂದು, “ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶಮಾಡುವಿರೋ?


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ I ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ II


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು