Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:8 - ಕನ್ನಡ ಸತ್ಯವೇದವು C.L. Bible (BSI)

8 ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:8
20 ತಿಳಿವುಗಳ ಹೋಲಿಕೆ  

“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.


ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!


ಇದೆ ಆ ಜನರ ಕೈಗಳಲಿ ಕೆಡುಕನ I ಬಲಗೈ ತುಂಬ ಲಂಚಕೋರತನ II


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಧನವಂತನಿಗೆ ಸ್ನೇಹಿತರು ಬಹುಮಂದಿ; ಬಡವನಿಗಿದ್ದ ಗೆಳೆಯನೂ ಪರಾರಿ.


ಅವರು ಮದ್ಯಪಾನವನ್ನು ಮಾಡಿದ ನಂತರ ವ್ಯಭಿಚಾರಕ್ಕೆ ಇಳಿಯುತ್ತಾರೆ. ಮಾನಕ್ಕಿಂತ ಅವಮಾನವೇ ಅವರಿಗೆ ಅತಿ ಪ್ರಿಯ.


ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು