Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:11 - ಕನ್ನಡ ಸತ್ಯವೇದವು C.L. Bible (BSI)

11 ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:11
24 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.


ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.


ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.


ಚದರಿಹೋದವರು ಕೂಡಿಬಂದರು ನಾಯಕರ ಬಳಿಗೆ ಸರ್ವೇಶ್ವರನ ಶೂರಜನರು ವೀರರಂತೆ ನೆರೆದುಬಂದರು ನನ್ನ ಸಹಾಯಕ್ಕೆ.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ?


ಹಿರಿಯರು ತೋಡಿದರೀ ಬಾವಿಯನ್ನು ಕೋಲುಕಡ್ಡಿಗಳಿಂದ ಪ್ರಜಾಧಿಪತಿಗಳು ಅಗೆದರಿದನ್ನು ರಾಜದಂಡಗಳಿಂದ.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.


ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ನನ್ನೊಡೆಯನ ದಾಸನಾದ ನನ್ನಂಥವನು ಎನ್ನೊಡೆಯರಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ಈಗ ಶಕ್ತಿಯನ್ನೆಲ್ಲಾ ಕಳೆದುಕೊಂಡಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲವಾಗಿದೆ,” ಎಂದು ಹೇಳಿದೆ.


ನನ್ನ ಹಿಂದೆಯೂ ಮುಂದೆಯೂ ನೀನಿರುವೆ I ಅಭಯ ಹಸ್ತವನು ನನ್ನ ಮೇಲಿರಿಸಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು