Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:3 - ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೋಶೆಯು ಬಂದು ಯೆಹೋವ ದೇವರ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲಾ ಒಂದೇ ಸ್ವರದಿಂದ, “ಯೆಹೋವ ದೇವರು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:3
23 ತಿಳಿವುಗಳ ಹೋಲಿಕೆ  

ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.


ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.


ಯೆಹೋಶುವ ಅವರಿಗೆ, “ನೀವು ಸರ್ವೇಶ್ವರನಿಗೇ ಸೇವೆಸಲ್ಲಿಸುವುದನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು,” ಎನ್ನಲು ಅವರು, “ಹೌದು, ನಾವೇ ಸಾಕ್ಷಿಗಳು,” ಎಂದು ಉತ್ತರಕೊಟ್ಟರು.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ನೀನು ಇಲ್ಲೇ ನನ್ನ ಬಳಿ ಇರು; ಅವರಿಗೆ ಬೋಧಿಸಬೇಕಾದ ಎಲ್ಲ ಆಜ್ಞೆಗಳನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ನಾಡಿನಲ್ಲಿ ಅವರು ಅವುಗಳನ್ನು ಅನುಸರಿಸಬೇಕು,’ ಎಂದು ಹೇಳಿದರು.


ಮೋಶೆ ಒಬ್ಬನೇ ಹೊರತು ಅವನ ಜೊತೆಯವರಲ್ಲಿ ಯಾರೂ ನನ್ನ ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು,” ಎಂದು ಹೇಳಿದರು.


ಅದಕ್ಕೆ ಜನರು, “ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆಸಲ್ಲಿಸುತ್ತೇವೆ. ಅವರ ಮಾತನ್ನೇ ಕೇಳುತ್ತೇವೆ,” ಎಂದರು.


“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.


ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?


ಜನರು ಯೆಹೋಶುವನಿಗೆ, “ಇಲ್ಲ, ನಾವು ಸರ್ವೇಶ್ವರಸ್ವಾಮಿಗೇ ಸೇವೆಸಲ್ಲಿಸುತ್ತೇವೆ,” ಎಂದರು.


ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.


ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.


“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II


ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು