Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:7 - ಕನ್ನಡ ಸತ್ಯವೇದವು C.L. Bible (BSI)

7 ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:7
17 ತಿಳಿವುಗಳ ಹೋಲಿಕೆ  

ಈ ಪತ್ರವನ್ನು ಎಲ್ಲ ಸಹೋದರರಿಗೂ ಓದಿಹೇಳಬೇಕೆಂದು ಪ್ರಭುವಿನ ಹೆಸರಿನಲ್ಲಿ ವಿಧಿಸುತ್ತಿದ್ದೇನೆ.


ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.


ಅದಕ್ಕೆ ಜನರು, “ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆಸಲ್ಲಿಸುತ್ತೇವೆ. ಅವರ ಮಾತನ್ನೇ ಕೇಳುತ್ತೇವೆ,” ಎಂದರು.


ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.


“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II


ಆದರೆ ಅವರ ನಾಲಿಗೆಯಾಡಿತು ಅಸತ್ಯ I ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ II


“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.


ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?


ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು