Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:1 - ಕನ್ನಡ ಸತ್ಯವೇದವು C.L. Bible (BSI)

1 ಮೋಶೆಗೆ ಸರ್ವೇಶ್ವರ ಸ್ವಾಮಿ ಹೀಗೆಂದು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:1
11 ತಿಳಿವುಗಳ ಹೋಲಿಕೆ  

ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.


“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.


ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,


ಮೋಶೆ ಇಸ್ರಯೇಲರ ಸಮಾಜವನ್ನೆಲ್ಲ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಸರ್ವೇಶ್ವರ ಹೀಗೆ ಆಜ್ಞಾಪಿಸಿದ್ದಾರೆ:


ಮೋಶೆ ಇಸ್ರಯೇಲರ ಇಡೀ ಸಮಾಜವನ್ನು ಉದ್ದೇಶಿಸಿ: “ಸರ್ವೇಶ್ವರನ ಆಜ್ಞೆ ಇದು: ನೀವು ನಿಮ್ಮ ನಿಮ್ಮ ಆಸ್ತಿಪಾಸ್ತಿಯಿಂದ ಸರ್ವೇಶ್ವರನಿಗೆ ಕಾಣಿಕೆಯನ್ನು ಕೊಡಬೇಕು. ಮನಃಪೂರ್ವಕವಾಗಿ ಕೊಡಬೇಕು. ಸರ್ವೇಶ್ವರನಿಗೆ ತರಬೇಕಾದಂಥ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,


ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಹಾಗು ಪರಿಮಳಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳು


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು; ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ, ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ;


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.


“ಈ ಕಾಣಿಕೆಯ ವಸ್ತುಗಳನ್ನು ಇವರ ಕೈಯಿಂದ ತೆಗೆದುಕೋ; ಇವು ದೇವದರ್ಶನದ ಗುಡಾರದ ಸೇವೆಗೆ ಉಪಯೋಗವಾಗಲಿ. ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಅವುಗಳನ್ನು ಕೊಡು,” ಎಂದು ಆಜ್ಞಾಪಿಸಿದರು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು