Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:18 - ಕನ್ನಡ ಸತ್ಯವೇದವು C.L. Bible (BSI)

18 ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:18
15 ತಿಳಿವುಗಳ ಹೋಲಿಕೆ  

ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.


ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.


ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.


ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


“ಇದೂ ಅಲ್ಲದೆ, ಅಪ್ಪಟ ಬಂಗಾರದ ಒಂದು ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ ಹಾಗು ಒಂದುವರೆ ಮೊಳ ಅಗಲದ್ದಾಗಿರಬೇಕು.


ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಕೃಪಾಸನಕ್ಕೆ ಜೋಡಿಸಬೇಕು.


ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.


ಮೊಗ್ಗುಗಳನ್ನೂ ಕೊಂಬೆಗಳನ್ನೂ ಒಳಗೊಂಡ ದೀಪವೃಕ್ಷವನ್ನೆಲ್ಲಾ ಅಪ್ಪಟ ಬಂಗಾರವನ್ನು ಉಪಯೋಗಿಸಿ ನಕಾಸಿ ಕೆಲಸದಿಂದ ಮಾಡಿಸಬೇಕು.


ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು