ವಿಮೋಚನಕಾಂಡ 25:30 - ಕನ್ನಡ ಸತ್ಯವೇದವು C.L. Bible (BSI)30 ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.