ವಿಮೋಚನಕಾಂಡ 25:31 - ಕನ್ನಡ ಸತ್ಯವೇದವು C.L. Bible (BSI)31 “ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.