Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:40 - ಕನ್ನಡ ಸತ್ಯವೇದವು C.L. Bible (BSI)

40 ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು, ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:40
15 ತಿಳಿವುಗಳ ಹೋಲಿಕೆ  

ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


“ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು.


ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.


ಆ ದೀಪಸ್ತಂಭದ ಬುಡಭಾಗವೂ ಅದರ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿದ್ದವು. ಸರ್ವೇಶ್ವರ ತೋರಿಸಿದ್ದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.


ನಾನು ನಿಮಗೆ ತೋರಿಸುವ ಮಾದರಿಯ ಪ್ರಕಾರವೇ ಆ ಗುಡಾರವನ್ನೂ ಅದರಲ್ಲಿನ ಎಲ್ಲ ಸಾಮಾಗ್ರಿಗಳನ್ನೂ ಮಾಡಿಸಬೇಕು.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಆ ದೀಪವೃಕ್ಷವನ್ನು ಅದರ ಎಲ್ಲ ಉಪಕರಣಗಳನ್ನು ಮಾಡಿಸಲು ಒಂದು ತಲಾಂತು ಅಪ್ಪಟ ಬಂಗಾರವನ್ನು ಉಪಯೋಗಿಸಬೇಕು.


ಆ ಬಲಿಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು.


ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.


ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.


ಅದೂ ಅಲ್ಲದೆ ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ, ಐದನ್ನು ದೇವಾಲಯದೊಳಗೆ ಬಲಗಡೆಯಲ್ಲೂ ಐದನ್ನು ಎಡಗಡೆಯಲ್ಲೂ ಇಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು