Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:32 - ಕನ್ನಡ ಸತ್ಯವೇದವು C.L. Bible (BSI)

32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಿ ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:32
6 ತಿಳಿವುಗಳ ಹೋಲಿಕೆ  

ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.


ಆ ಪರದೆ ತೂಗಿಸುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ, ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು.


ತೆರೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗೋಸ್ಕರ ಐದು ತಾಮ್ರದ ಗದ್ದಿಗೇ ಕಲ್ಲುಗಳನ್ನು ಎರಕಹೊಯ್ಯಿಸಬೇಕು.


ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,


ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.


ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು