Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:35 - ಕನ್ನಡ ಸತ್ಯವೇದವು C.L. Bible (BSI)

35 ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪವೃಕ್ಷವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಗುಡಾರದ ಉತ್ತರ ಕಡೆಯಲ್ಲಿ ಪರದೆಯ ಹೊರಗೆ ಮೇಜನ್ನು ಇಡಬೇಕು ಮತ್ತು ದೀಪಸ್ತಂಭವನ್ನು ಅದರ ಎದುರಾಗಿ ದಕ್ಷಿಣದ ದಿಕ್ಕಿನಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:35
7 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು


ಅದಲ್ಲದೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು


ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.


ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು