Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:36 - ಕನ್ನಡ ಸತ್ಯವೇದವು C.L. Bible (BSI)

36 ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:36
19 ತಿಳಿವುಗಳ ಹೋಲಿಕೆ  

ಡೇರೆಯ ಬಾಗಿಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ತ್ಯಜಿಸಿದನು ಸಿಲೋವಿನಲಿ ತನಗಿದ್ದ ಆಲಯವನು I ಜನರ ಮಧ್ಯೆ ವಾಸಿಸಲು ತನಗಿದ್ದಾ ಗುಡಾರವನು II


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.


ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.


ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಗುಡಾರ, ಅದರ ಮೇಲಿದ್ದ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ


ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು; ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ, ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ;


ಅವರು ಮಾಡಬೇಕಾದುವುಗಳು ಇವು: ದೇವದರ್ಶನದ ಗುಡಾರ,


ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.


ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು.


“ಆರೋನನು ಧರಿಸಬೇಕಾದ ನಿಲುವಂಗಿಯನ್ನು ನಯವಾದ ನಾರಿನಿಂದ ನೇಯಿಸು. ಅವನ ಪೇಟವನ್ನೂ ಅಂತೆಯೇ ನಯವಾದ ನಾರಿನಿಂದ ಮಾಡಿಸು. ಅವನ ನಡುಕಟ್ಟು ಕಸೂತಿ ಕೆಲಸದಿಂದ ಅಲಂಕಾರವಾಗಿರಬೇಕು.


ಅಂಗಳದ ಬಾಗಲಲ್ಲಿದ್ದ ಪರದೆಯು ಹುರಿನಾರಿನ ಬಟ್ಟೆಯಿಂದಲೂ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಲ್ಪಟ್ಟಿತು. ಅದರ ಉದ್ದ ಇಪ್ಪತ್ತು ಮೊಳವಾಗಿತ್ತು; ಅದರ ಅಗಲ ಅಂಗಳದ ಮಿಕ್ಕ ತೆರೆಗಳಂತೆ ಐದು ಮೊಳ.


ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.


“ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.


ಅಭಿಷೇಕ ತೈಲ, ಪರಿಮಳ ದ್ರವ್ಯ, ಗುಡಾರದ ಬಾಗಿಲಿನ ಪರದೆ,


ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು