Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:10 - ಕನ್ನಡ ಸತ್ಯವೇದವು C.L. Bible (BSI)

10 ಆ ಕಡೆಯಲ್ಲಿ ಇಪ್ಪತ್ತು ಕಂಬಗಳು ಹಾಗು ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:10
7 ತಿಳಿವುಗಳ ಹೋಲಿಕೆ  

ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು. ಅದರ ಸುತ್ತಳತೆ 5:3 ಮೀಟರ್. ಅದರ ಒಳಭಾಗ ಹೊಳ್ಳಾಗಿತ್ತು. ಆ ಲೋಹ ನಾಲ್ಕು ಬೆರಳು ದಪ್ಪವಾಗಿತ್ತು.


ಆ ಪರದೆ ತೂಗಿಸುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ, ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು.


“ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು.


ಅದೇ ರೀತಿ ಉತ್ತರ ಕಡೆಯಲ್ಲೂ ನೂರು ಮೊಳ ಉದ್ದದ ತೆರೆಗಳು, ಇಪ್ಪತ್ತು ಕಂಬಗಳು ಹಾಗು ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದವಾಗಿರಬೇಕು.


ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.


ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನು, ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು