Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:21 - ಕನ್ನಡ ಸತ್ಯವೇದವು C.L. Bible (BSI)

21 ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:21
44 ತಿಳಿವುಗಳ ಹೋಲಿಕೆ  

“ಇದು ಇಸ್ರಯೇಲರಿಗೆ ಶಾಶ್ವತ ನಿಯಮವಾಗಿರುತ್ತದೆ. ಮೈಲಿಗೆ ನೀಗಿಸುವ ಆ ನೀರನ್ನು ಚಿಮುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಆ ನೀರನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೂ ಮಡಿಗೆಟ್ಟವನಾಗಿರುವನು.


ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.


ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು.


ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”


ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದಕ್ಕೆ ಕರೆದುಕೊಂಡು ಬಾ. ಇಸ್ರಯೇಲ್ ಜನರನ್ನು ಸಭೆಸೇರಿಸು.


ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆ ದೀಪಗಳು ಉರಿಯುತ್ತಿರಬೇಕು. ಅವು ಸರ್ವೇಶ್ವರನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.


ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನ ಗುಡಾರದೊಳಗೆ ಆಜ್ಞಾಶಾಸನಗಳಿರುವ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ನಾನು ದೇವದರ್ಶನದ ಗುಡಾರವನ್ನು ಮತ್ತು ಬಲಿಪೀಠವನ್ನು ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು. ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು.


ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.


ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.


“ದೇವಸ್ಥಾನದಲ್ಲಿರುವ ದೀಪಗಳನ್ನು ಪ್ರತಿನಿತ್ಯವೂ ಉರಿಸಬೇಕು. ಇದಕ್ಕಾಗಿ ಇಸ್ರಯೇಲರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಅಪ್ಪಟ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ತೊಳೆದುಕೊಳ್ಳದೆ ಬಂದರೆ ಸಾಯುವರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತವಾದ ನಿಯಮ.


ಅವರಲ್ಲಿ ಒಬ್ಬನು ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಸಾಂಬ್ರಾಣಿಯೆಲ್ಲವನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟು ಮಾಡಬೇಕು.


ಇಸ್ರಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಸರ್ವೇಶ್ವರ ಅವರನ್ನು ಮೋಶೆಯ ಮುಖಾಂತರ ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ವಿಧಿಸಿದರು.”


“ನೀನೂ ನಿನ್ನ ಪುತ್ರರು ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು, ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತ ನಿಯಮ.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.


ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು