ವಿಮೋಚನಕಾಂಡ 28:1 - ಕನ್ನಡ ಸತ್ಯವೇದವು C.L. Bible (BSI)1 :ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಲ್ಲದೆ ನನಗೆ ಯಾಜಕಸೇವೆ ಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಲ್ಲಿಂದ ನಿನ್ನ ಹತ್ತಿರಕ್ಕೆ ಕರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು. ಅಧ್ಯಾಯವನ್ನು ನೋಡಿ |