Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:15 - ಕನ್ನಡ ಸತ್ಯವೇದವು C.L. Bible (BSI)

15 “ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ದೈವನಿರ್ಣಯದ ಚೀಲದ ಪದಕವನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು. ಅದನ್ನು ಕವಚದ ಕೆಲಸದಂತೆಯೆ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಮಹಾಯಾಜಕನಿಗೆ ದೈವನಿರ್ಣಯದ ಪದಕವನ್ನು ಮಾಡಿಸು. ಏಫೋದನ್ನು ಮಾಡಿಸಿದಂತೆ ನಿಪುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು, ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:15
11 ತಿಳಿವುಗಳ ಹೋಲಿಕೆ  

ವಕ್ಷಪದಕವನ್ನು ಅವನಿಗೆ ಬಿಗಿಸಿ, ಅದರ ಚೀಲದೊಳಗೆ ಊರೀಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಹಾಕಿ


ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.


‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ.


ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.


ಅಲ್ಲದೇ ಹೆಣೆಗೇ ಕೆಲಸದಿಂದ ಹುರಿಗಳಂತಿರುವ ಎರಡು ಅಪ್ಪಟ ಬಂಗಾರದ ಸರಪಣಿಗಳನ್ನು ಮಾಡಿಸಿ ಆ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.


ಅದು ಒಂದು ಗೇಣು ಉದ್ದ, ಒಂದು ಗೇಣು ಅಗಲ ಹಾಗು ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಲಿ.


ತರುವಾಯ ಆರೋನನಿಗೆ ಆ ವಸ್ತ್ರಗಳನ್ನು ಅಂದರೆ, ನಿಲುವಂಗಿಯನ್ನು, ಕವಚದೊಳಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು, ಎಫೋದ್ ಕವಚವನ್ನು, ಎದೆಕವಚವನ್ನು ತೊಡಿಸಿ, ಕವಚದ ಕಸೂತಿ ನಡುಕಟ್ಟನ್ನು ಕಟ್ಟು.


ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು