Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಅಣ್ಣನಾದ ಆರೋನನಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿನ್ನ ಅಣ್ಣನಾದ ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿಸು. ಈ ಬಟ್ಟೆಗಳು ಅವನಿಗೆ ಘನತೆಯನ್ನೂ ಗೌರವವನ್ನೂ ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಸಹೋದರನಾದ ಆರೋನನ ಗೌರವಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:2
36 ತಿಳಿವುಗಳ ಹೋಲಿಕೆ  

ಬಳಿಕ ಮೋಶೆ ಅಭಿಷೇಕ ಎಣ್ಣೆಯಿಂದಲೂ ಬಲಿಪೀಠದ ಮೇಲಿದ್ದ ರಕ್ತದಿಂದಲೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೂ ಚಿಮುಕಿಸಿದನು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠಿಸಿದನು.


ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು,


ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!


“ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗು ಶೋಭೆ ಸಿಗುವಂತೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಹಾಗು ಪೇಟಗಳನ್ನು ಮಾಡಿಸು.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II


ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಾಪಿಸು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು