Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:21 - ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:21
11 ತಿಳಿವುಗಳ ಹೋಲಿಕೆ  

ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಹಾಗು ವೈಢೂರ್ಯಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


ಅದೂ ಅಲ್ಲದೆ ಆ ಎದೆಫಲಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಅಪ್ಪಟ ಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಶಾಶ್ವತ ಶಾಸನವಾಗಿಸಿದ್ದರೆ ಎಷ್ಟೋ ಒಳಿತು.


ಸ್ವಜನರನು ದೇವ ಸರ್ವೇಶ್ವರ ಕಾಪಾಡುವನು ಮೇಷಪಾಲನಂತೆ ನಾಡಿನೊಳು ಥಳಥಳಿಸುವರವರು ಕಿರೀಟದ ರತ್ನಗಳಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು