ವಿಮೋಚನಕಾಂಡ 28:29 - ಕನ್ನಡ ಸತ್ಯವೇದವು C.L. Bible (BSI)29 “ದೈವನಿರ್ಣಯದ ಚೀಲವುಳ್ಳ ಆ ಫಲಕದ ಮೇಲೆ ಇಸ್ರಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಅದನ್ನು ತನ್ನ ಎದೆಯ ಮೇಲೆ ಧರಿಸಿಕೊಂಡು ಪವಿತ್ರಸ್ಥಾನದೊಳಗೆ ಬರುವಾಗಲೆಲ್ಲಾ ಆ ಹೆಸರುಗಳನ್ನು ಸರ್ವೇಶ್ವರನಾದ ನನ್ನ ನೆನಪಿಗೆ ಸತತವಾಗಿ ತರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೈವನಿರ್ಣಯದ ಪದಕದ ಮೇಲೆ ಇಸ್ರಾಯೇಲ್ಯರ ಕುಲಗಳ ಹೆಸರುಗಳು ಬರೆದಿರುವದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ನಿತ್ಯವಾಗಿ ಯೆಹೋವನ ನೆನಪಿಗೆ ತರುವದಕ್ಕಾಗಿ ತನ್ನ ಹೃದಯದ ಮೇಲೆ ವಹಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು. ಅಧ್ಯಾಯವನ್ನು ನೋಡಿ |