ವಿಮೋಚನಕಾಂಡ 28:3 - ಕನ್ನಡ ಸತ್ಯವೇದವು C.L. Bible (BSI)3 ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು. ಅಧ್ಯಾಯವನ್ನು ನೋಡಿ |