Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:36 - ಕನ್ನಡ ಸತ್ಯವೇದವು C.L. Bible (BSI)

36 “ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು” ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:36
22 ತಿಳಿವುಗಳ ಹೋಲಿಕೆ  

ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.


ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.


ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.


ಆರೋನನು ಸೇವೆ ಸಲ್ಲಿಸುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಪವಿತ್ರಸ್ಥಾನದೊಳಗೆ ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಹಾಗು ಹೋಗುವಾಗ ಆ ಗೆಜ್ಜೆಗಳ ಶಬ್ದ ಕೇಳಿಸಬೇಕು. ಇಲ್ಲದಿದ್ದರೆ ಅವನು ಸಾಯುವನು.


ಅದನ್ನು ಪೇಟಕ್ಕೆ ಬಿಗಿಯುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಪೇಟದ ಮುಂಭಾಗದಲ್ಲಿ ಇರಬೇಕು.


ಅವನ ತಲೆಗೆ ಪೇಟವನ್ನು ಹಾಕಿಸಿ ಪೇಟದ ಮೇಲೆ ಪವಿತ್ರ ಪಟ್ಟಿಯನ್ನು ಕಟ್ಟಿಸು;


ಅದನ್ನು ಪೇಟಕ್ಕೆ ಬಿಗಿಸುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೆ ಕೆಲಸದ ರೀತಿಯಲ್ಲಿ ಅಂಗಿಗಳನ್ನೂ


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು