Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:12 - ಕನ್ನಡ ಸತ್ಯವೇದವು C.L. Bible (BSI)

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:12
18 ತಿಳಿವುಗಳ ಹೋಲಿಕೆ  

ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ಅದು ಒಂದು ಮೊಳ ಉದ್ದ ಹಾಗು ಒಂದು ಮೊಳ ಅಗಲವಾಗಿದ್ದು ಚಚ್ಚೌಕವಾಗಿರಲಿ. ಅದರ ಎತ್ತರ ಎರಡು ಮೊಳವಿರಲಿ. ಅದರ ಕೊಂಬುಗಳು ಅದರ ಅಂಗಾಂಗವಾಗಿರಲಿ.


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.


ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.


ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.


ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬೆಗಳನ್ನು ಮಾಡಿದನು; ಅವು ಬಲಿಪೀಠದ ಅಂಗಾಂಗಗಳಾಗಿದ್ದವು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಿದನು.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ಅದನ್ನು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು