Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:14 - ಕನ್ನಡ ಸತ್ಯವೇದವು C.L. Bible (BSI)

14 ಹೋರಿಯ ಮಾಂಸವನ್ನು, ಚರ್ಮವನ್ನು ಹಾಗು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ಪಾಪಪರಿಹಾರಕ ಬಲಿದಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:14
22 ತಿಳಿವುಗಳ ಹೋಲಿಕೆ  

ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.


ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.


ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.


ಪಾಪಪರಿಹಾರಕ ಬಲಿಗಾಗಿ ಒಂದು ಹೋತ;


ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಆರೋನನು ತನಗಾಗಿ ದೋಷಪರಿಹಾರಕ ಬಲಿಯ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.


ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಈ ರೀತಿಯಾಗಿ ಬರಬೇಕು. ದೋಷಪರಿಹಾರಕ ಬಲಿಗಾಗಿ ಹೋರಿಯನ್ನೂ ದಹನಬಲಿಗಾಗಿ ಟಗರನ್ನೂ ತರಬೇಕು.


ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.


ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


“ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು.


ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.


ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.


ಅವನು ಅದರ ತಲೆಯ ಮೇಲೆ ಕೈಯಿಟ್ಟು ನಂತರ ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.


ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲೇ ದಹಿಸಿಬಿಡಬೇಕು.


ದೋಷಪರಿಹಾರಕ ಬಲಿಗಾಗಿ ವಧಿತವಾದ ಹೋರಿಯನ್ನು ಒಪ್ಪಿಸಿದಾಗ ಪವಿತ್ರಾಲಯದ ಹೊರಗೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ, ಅದನ್ನು ಸುಡಬೇಕು.


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು