Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:25 - ಕನ್ನಡ ಸತ್ಯವೇದವು C.L. Bible (BSI)

25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸರ್ವಾಂಗಹೋಮದ್ರವ್ಯದ ಸಂಗಡ ಯೆಹೋವನಿಗೆ ಆಹುತಿಕೊಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:25
25 ತಿಳಿವುಗಳ ಹೋಲಿಕೆ  

ಆಮೇಲೆ ಮೋಶೆ ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಬಲಿಪೀಠದಲ್ಲಿ ದಹನಬಲಿ ದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನಬಲಿ, ಯಾಜಕಾಭಿಷೇಕ ಬಲಿಯಾಗಿತ್ತು.


ಸಂಜೆ ಎರಡನೆಯ ಕುರಿಯನ್ನು ಬಲಿದಾನ ಮಾಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯವನ್ನೂ ಪಾನವನ್ನೂ ಸಮರ್ಪಿಸಬೇಕು. ಅದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗಿರುವುದು.


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.


ಅದು ಮಹಾಪರಿಶುದ್ಧವಾಗಿರುವುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ಊಟಮಾಡಿ. ಜನರು ಸರ್ವೇಶ್ವರನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲತಕ್ಕದೆಂದು ಅಪ್ಪಣೆಯಾಗಿದೆ.


ಜನರು ಸರ್ವೇಶ್ವರನಿಗೆ ಹೋಮ ಮಾಡುವಂಥ ಪ್ರಾಣಿಪಶುಗಳ ಕೊಬ್ಬನ್ನು ಯಾರಾದರು ತಿಂದರೆ ಅವರು ಕುಲದಿಂದ ಬಹಿಷ್ಕೃತರಾಗಬೇಕು.


ಬಲಿಪೀಠದ ಮೇಲೆ ಸರ್ವೇಶ್ವರನಿಗೆ ಹೋಮಮಾಡಬೇಕು. ಇದು ಪ್ರಾಯಶ್ಚಿತ್ತ ಬಲಿ.


ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.


ಅದರ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ


ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.


ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು.


ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.


ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.


ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.


ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.


ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.


“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು