ವಿಮೋಚನಕಾಂಡ 29:30 - ಕನ್ನಡ ಸತ್ಯವೇದವು C.L. Bible (BSI)30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ತೊಟ್ಟುಕೊಂಡಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡಿಸುವದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆರೋನನ ತರುವಾಯ ಅವನ ಮಗನು ಮಹಾಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿ |