ವಿಮೋಚನಕಾಂಡ 29:37 - ಕನ್ನಡ ಸತ್ಯವೇದವು C.L. Bible (BSI)37 ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು. ಅಧ್ಯಾಯವನ್ನು ನೋಡಿ |