ವಿಮೋಚನಕಾಂಡ 29:42 - ಕನ್ನಡ ಸತ್ಯವೇದವು C.L. Bible (BSI)42 ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರೂ ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮಗೆ ದರ್ಶನವನ್ನು ಕೊಟ್ಟು ನಿನ್ನ ಸಂಗಡ ಮಾತಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು. ಅಧ್ಯಾಯವನ್ನು ನೋಡಿ |