ವಿಮೋಚನಕಾಂಡ 29:44 - ಕನ್ನಡ ಸತ್ಯವೇದವು C.L. Bible (BSI)44 ನಾನು ದೇವದರ್ಶನದ ಗುಡಾರವನ್ನು ಮತ್ತು ಬಲಿಪೀಠವನ್ನು ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು. ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು; ಆರೋನನನ್ನೂ ಅವನ ಮಕ್ಕಳನ್ನೂ ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು. ಅಧ್ಯಾಯವನ್ನು ನೋಡಿ |