Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:10 - ಕನ್ನಡ ಸತ್ಯವೇದವು C.L. Bible (BSI)

10 ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನನ್ನ ಜನರಾಗಿರುವ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಹೊರಗೆ ಬರ ಮಾಡುವದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:10
20 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II


ಆಗ ಸಮುವೇಲನು, “ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತರುವುದಕ್ಕಾಗಿ ಮೋಶೆ ಹಾಗು ಆರೋನರನ್ನು ನೇಮಿಸಿದ ಸರ್ವೇಶ್ವರಸ್ವಾಮಿಯೇ ಇದಕ್ಕೆ ಸಾಕ್ಷಿ: ಇಲ್ಲಿ ನಿಂತುಕೊಳ್ಳಿರಿ:


ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.


ಇದಲ್ಲದೆ ದೇವರು ಅಬ್ರಹಾಮನಿಗೆ, ‘ನಿನ್ನ ಸಂತತಿಯವರು ಅನ್ಯದೇಶದಲ್ಲಿ ಗುಲಾಮರಾಗುವರು; ನಾನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಒಳಗಾಗುವರು.


ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.


“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.


ಇಸ್ರಯೇಲರು ಈಜಿಪ್ಟ್ ದೇಶದಲ್ಲಿ ನಾನೂರಮೂವತ್ತು ವರ್ಷಗಳ ಕಾಲ ವಾಸವಾಗಿದ್ದರು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.


ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು