Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:12 - ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:12
43 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು . ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು .


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು.


ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.


ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.


ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.


ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.


ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.


ಮೋಶೆಯ ಮಾವ ಇತ್ರೋ, ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.


ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.


ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’." ಎಂದನು.


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿ’ ಎಂದು ಕರೆದರೆ ಸರ್ವೇಶ್ವರ ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾರೆಂಬುದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ,” ಎಂದನು.


ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು