ವಿಮೋಚನಕಾಂಡ 3:13 - ಕನ್ನಡ ಸತ್ಯವೇದವು C.L. Bible (BSI)13 ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು. ಅಧ್ಯಾಯವನ್ನು ನೋಡಿ |