Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:17 - ಕನ್ನಡ ಸತ್ಯವೇದವು C.L. Bible (BSI)

17 ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:17
22 ತಿಳಿವುಗಳ ಹೋಲಿಕೆ  

ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು.


ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಈಜಿಪ್ಟ್ ದೇಶದಿಂದ ಕರೆದುತಂದು ಹಾಲೂಜೇನೂ ಹರಿಯುವ ಈ ನಾಡನ್ನು ನಮಗೆ ಕೊಟ್ಟಿದ್ದಾರೆ.


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು