Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:6 - ಕನ್ನಡ ಸತ್ಯವೇದವು C.L. Bible (BSI)

6 ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:6
42 ತಿಳಿವುಗಳ ಹೋಲಿಕೆ  

ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯ ಗ್ರಂಥದಲ್ಲಿ, ಅಂದರೆ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲಿ ಸರ್ವೇಶ್ವರನನ್ನು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು ಆಗಿದ್ದಾರೆ’ ಎಂದು ಹೇಳಲಾಗಿದೆ.


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?


“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.


‘ನಾನು ನಿನ್ನ ಪಿತೃಗಳ ದೇವರು; ಅಬ್ರಹಾಮ, ಇಸಾಕ ಮತ್ತು ಯಕೋಬನ ದೇವರು ಆಗಿದ್ದೇನೆ’ ಎಂದು ಸರ್ವೇಶ್ವರನ ವಾಣಿ ಉಂಟಾಯಿತು. ಆಗ ಮೋಶೆ ಗಡಗಡನೆ ನಡುಗಿದನು. ಕಣ್ಣೆತ್ತಿ ನೋಡಲು ಹಿಂಜರಿದನು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.


ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಸ್ಮರಿಸಿಕೊ ಪ್ರಭೂ, ಆತನು ಮಾಡಿದ ಶಪಥವನು I ಯಕೋಬ್ಯ ಘನದೇವನಿಗಾತ ಕೊಟ್ಟ ಈ ಮಾತನು II


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.


ತಮ್ಮ ಮಧ್ಯೆ ವಾಸವಾಗುವುದಕ್ಕಾಗಿಯೇ ತಮ್ಮನ್ನು ಈಜಿಪ್ಟಿನಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಸರ್ವೇಶ್ವರನು ನಾನೇ ಎಂದು ಅವರು ಅರಿತುಕೊಳ್ಳುವರು. ಹೌದು, ನಾನೇ ಅವರ ದೇವರಾದ ಸರ್ವೇಶ್ವರ ಸ್ವಾಮಿ.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಸರ್ವೇಶ್ವರ‍ಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು.


ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!


ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.


ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.


ಹೀಗೆ ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ಹಟವು ಎಲ್ಲಿಯವರೆಗೆ ಸಾಗುವುದೊ ನೋಡಿಯೇ ಬಿಡಬೇಕೆಂದು ಅವನ ಈ ವರ್ತನೆಯ ಬಗ್ಗೆ ಹಾಮಾನನಿಗೆ ದೂರು ಹೇಳಿದರು.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು.


ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು