Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:7
31 ತಿಳಿವುಗಳ ಹೋಲಿಕೆ  

ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.


ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.


ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಅದೇ ದಿನ, ಕೆಲಸಮಾಡಿಸುವವರನ್ನೂ ಮೇಸ್ತ್ರಿಗಳನ್ನೂ ಕರೆಯಿಸಿ,


ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ.


ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು.


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


ನೀನೇ ನೋಡಿರುವೆ ಪ್ರಭು, ಇನ್ನು ಸುಮ್ಮನಿರಬೇಡ I ನನ್ನೊಡೆಯಾ, ನನಗಿನ್ನಾದರು ದೂರವಾಗಿರಬೇಡ II


ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು