Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:8 - ಕನ್ನಡ ಸತ್ಯವೇದವು C.L. Bible (BSI)

8 ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:8
54 ತಿಳಿವುಗಳ ಹೋಲಿಕೆ  

ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಅಲ್ಲಿನ ಹಣ್ಣುಹಂಪಲುಗಳಲ್ಲಿ ಕೆಲವನ್ನು ತಂದು ತೋರಿಸಿದರು; ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಆ ನಾಡು ಒಳ್ಳೆಯ ನಾಡೆಂದು ನಮಗೆ ತಿಳಿಸಿದರು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.


ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.


ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ಅವರ ವಾಸಸ್ಥಳ ಒಳ್ಳೆಯದೋ ಕೆಟ್ಟದೋ, ಅವು ಪಾಳೆಯಗಳೋ ಕೋಟೆಗಳೋ


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು.


ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.


ಆ ನಾಡು ಹೇಗಿದೆ, ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಅವರ ಸಂಖ್ಯೆ ದೊಡ್ಡದೋ ಚಿಕ್ಕದೋ


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು